Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:24 - ಕನ್ನಡ ಸತ್ಯವೇದವು C.L. Bible (BSI)

24 ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:24
17 ತಿಳಿವುಗಳ ಹೋಲಿಕೆ  

ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು