Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:3 - ಕನ್ನಡ ಸತ್ಯವೇದವು C.L. Bible (BSI)

3 ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:3
29 ತಿಳಿವುಗಳ ಹೋಲಿಕೆ  

ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.


ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು