Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:4 - ಕನ್ನಡ ಸತ್ಯವೇದವು C.L. Bible (BSI)

4 ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರು, “ಇಲ್ಲ, ನೀನು ನಮಗೆ ಕೆಟ್ಟದ್ದೇನನ್ನೂ ಮಾಡಿಲ್ಲ. ನೀನು ನಮ್ಮನ್ನು ಎಂದೂ ವಂಚಿಸಿಲ್ಲ; ನಮ್ಮಿಂದ ಏನನ್ನೂ ತೆಗೆದುಕೊಂಡಿಲ್ಲ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:4
6 ತಿಳಿವುಗಳ ಹೋಲಿಕೆ  

ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.


ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು