Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:5 - ಕನ್ನಡ ಸತ್ಯವೇದವು C.L. Bible (BSI)

5 ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:5
14 ತಿಳಿವುಗಳ ಹೋಲಿಕೆ  

ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.


ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.


ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.


ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.


ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು