Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ ನಿಮ್ಮ ಪಿತೃಗಳಿಗೋಸ್ಕರವೂ ನಡಿಸಿದ ನೀತಿಕಾರ್ಯಗಳನ್ನು ಕುರಿತು ಆತನೆದುರಿನಲ್ಲಿ ನಿಮಗೆ ನೆನಪು ಹುಟ್ಟಿಸಿ ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಲ್ಲಿ ನಿಂತುಕೊಂಡು ಕೇಳಿರಿ. ಯೆಹೋವನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ಮಾಡಿದ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:7
7 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು