Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:9 - ಕನ್ನಡ ಸತ್ಯವೇದವು C.L. Bible (BSI)

9 ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್‍ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:9
15 ತಿಳಿವುಗಳ ಹೋಲಿಕೆ  

ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು