1 ಸಮುಯೇಲ 13:13 - ಕನ್ನಡ ಸತ್ಯವೇದವು C.L. Bible (BSI)13 ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.