Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:14 - ಕನ್ನಡ ಸತ್ಯವೇದವು C.L. Bible (BSI)

14 ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:14
21 ತಿಳಿವುಗಳ ಹೋಲಿಕೆ  

ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ಆರಿಸಿಕೊಂಡನು ದಾಸ ದಾವೀದನನು I ತೆಗೆದುಕೊಂಡನು ಕುರಿಹಟ್ಟಿಯಿಂದವನನು II


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು.


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ.


ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ಆಗ ಯೆಶಾಯನು ಅವನಿಗೆ, “ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ಮಾತನ್ನು ಕೇಳು :


ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು