Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:7 - ಕನ್ನಡ ಸತ್ಯವೇದವು C.L. Bible (BSI)

7 ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತಕ್ಕೂ ಹೊರಟು ಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:7
15 ತಿಳಿವುಗಳ ಹೋಲಿಕೆ  

ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


“ಆ ಕಾಲದಲ್ಲಿ ನಾವು ಆ ನಾಡನ್ನೆಲ್ಲ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.


ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :


ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ


ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು.


ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು