Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:18 - ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:18
13 ತಿಳಿವುಗಳ ಹೋಲಿಕೆ  

ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.


ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.


ಅಲ್ಲಿ ಅದನ್ನು ದಾಗೋನನ ಮಗ್ಗುಲಲ್ಲೇ ಇಟ್ಟರು.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿ,” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಾಗ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲದಿರುವುದು ತಿಳಿದುಬಂದಿತು.


ಸೌಲನು ತನ್ನ ಸೈನಿಕರನ್ನು, “ಬನ್ನಿ, ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ,” ಎಂದು ಕರೆದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿ; ನಾವು ದೇವರನ್ನು ವಿಚಾರಿಸೋಣ,” ಎಂದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು