Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:20 - ಕನ್ನಡ ಸತ್ಯವೇದವು C.L. Bible (BSI)

20 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸೌಲನೂ, ಅವನ ಸಂಗಡ ಯುದ್ಧಕ್ಕಿದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ, ಫಿಲಿಷ್ಟಿಯರಲ್ಲಿ ಗಲಿಬಿಲಿಯುಂಟಾಗಿ ಒಬ್ಬನ ಖಡ್ಗವು ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನನ್ನು ಕೊಂದುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:20
8 ತಿಳಿವುಗಳ ಹೋಲಿಕೆ  

ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು