Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:23 - ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:23
12 ತಿಳಿವುಗಳ ಹೋಲಿಕೆ  

ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು