Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:24 - ಕನ್ನಡ ಸತ್ಯವೇದವು C.L. Bible (BSI)

24 ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:24
19 ತಿಳಿವುಗಳ ಹೋಲಿಕೆ  

ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;


ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.


ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.


ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.


ಸರ್ವೇಶ್ವರನು ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ, ನಿನ್ನ ಹೊಟ್ಟೆ ಉಬ್ಬುವಂತೆ ಮಾಡಿ, ನೀನು ನಿನ್ನ ಜನರ ಮಧ್ಯೆ ಶಾಪಗ್ರಸ್ತಳನ್ನಾಗಿ ಮಾಡಲಿ.


ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.


ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು