1 ಸಮುಯೇಲ 14:27 - ಕನ್ನಡ ಸತ್ಯವೇದವು C.L. Bible (BSI)27 ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು. ಅಧ್ಯಾಯವನ್ನು ನೋಡಿ |