Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:29 - ಕನ್ನಡ ಸತ್ಯವೇದವು C.L. Bible (BSI)

29 “ನನ್ನ ತಂದೆ ನಾಡಿಗೆ ನಷ್ಟವನ್ನುಂಟುಮಾಡಿದ್ದಾರೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದುದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:29
5 ತಿಳಿವುಗಳ ಹೋಲಿಕೆ  

ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ಒಡನೆ ಒಬ್ಬನು ಅವನಿಗೆ, “ಈ ದಿನ ಊಟಮಾಡುವಂಥವರು ಶಾಪಗ್ರಸ್ಥರಾಗುವರೆಂದು ನಿನ್ನ ತಂದೆ ಆಣೆಯಿಟ್ಟು ಹೇಳಿದ್ದಾರೆ,” ಎಂದು ತಿಳಿಸಿದನು. ಜನರು ಬಹಳವಾಗಿ ಬಳಲಿಹೋದುದನ್ನು ಕಂಡು ಯೋನಾತಾನನು ಆ ವ್ಯಕ್ತಿಗೆ,


ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚುಮಂದಿ ಇದ್ದಾರೆ,” ಎಂದನು.


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು