1 ಸಮುಯೇಲ 14:3 - ಕನ್ನಡ ಸತ್ಯವೇದವು C.L. Bible (BSI)3 ‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಈ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿ ಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು. ಅಧ್ಯಾಯವನ್ನು ನೋಡಿ |