Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:33 - ಕನ್ನಡ ಸತ್ಯವೇದವು C.L. Bible (BSI)

33 ಆಗ ಕೆಲವರು ಸೌಲನಿಗೆ, “ನೋಡಿ, ಜನರು ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡುತ್ತಿದ್ದಾರೆ,” ಎಂದು ತಿಳಿಸಿದರು. ಅವನು, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ಒಂದು ದೊಡ್ಡ ಕಲ್ಲನ್ನು ಹೊರಳಿಸಿ ತಂದಿಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಕೆಲವರು ಸೌಲನಿಗೆ - ನೋಡು, ಜನರು ರಕ್ತವನ್ನು ಭುಜಿಸಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡುತ್ತಾರೆ ಎಂದು ತಿಳಿಸಲು ಅವನು ಅವರಿಗೆ - ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲನ್ನು ಹೊರಳಿಸಿ ತಂದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಅವರು ಸೌಲನಿಗೆ, “ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವುದರಿಂದ, ಯೆಹೋವ ದೇವರಿಗೆ ವಿರೋಧವಾಗಿ ಪಾಪ ಮಾಡುತ್ತಾರೆ,” ಎಂದು ತಿಳಿಸಿದರು. ಅದಕ್ಕವನು, “ನೀವು ನಂಬಿಕೆದ್ರೋಹ ಮಾಡಿದಿರಿ. ಈಗ ಒಂದು ದೊಡ್ಡ ಕಲ್ಲನ್ನು ನನ್ನ ಬಳಿಗೆ ಹೊರಳಿಸಿ ಬಿಡಿರಿ,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:33
12 ತಿಳಿವುಗಳ ಹೋಲಿಕೆ  

ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು.


ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.”


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.


ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


“ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.


ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಬಳಿಕ ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಬೇಡಿ, ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿಗೆ ತಂದು ಕೊಂದು ತಿನ್ನಿ,’ ಎಂದು ಹೇಳಿ,” ಎಂದನು. ಹಾಗೆಯೇ ಜನರೆಲ್ಲರು ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು