1 ಸಮುಯೇಲ 14:40 - ಕನ್ನಡ ಸತ್ಯವೇದವು C.L. Bible (BSI)40 ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು,” ಎಂದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆಗ ಸೌಲನು ಅವರಿಗೆ - ನೀವೆಲ್ಲರೂ ಒಂದು ಕಡೆಯಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು ಅನ್ನಲು ಅವರು - ನಿನ್ನ ಇಷ್ಟದಂತೆ ಆಗಲಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು. ಅವರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಸೌಲನು ಸಮಸ್ತ ಇಸ್ರಾಯೇಲರಿಗೆ, “ನೀವು ಒಂದು ಕಡೆಯಲ್ಲಿ ಇರಿ. ನಾನೂ, ನನ್ನ ಮಗ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ,” ಎಂದನು. ಜನರು ಸೌಲನಿಗೆ, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನು ಮಾಡು,” ಎಂದರು. ಅಧ್ಯಾಯವನ್ನು ನೋಡಿ |