1 ಸಮುಯೇಲ 14:41 - ಕನ್ನಡ ಸತ್ಯವೇದವು C.L. Bible (BSI)41 ಅನಂತರ ಸೌಲನು, “ಇಸ್ರಯೇಲ್ ದೇವರೇ, ಸತ್ಯವನ್ನು ತಿಳಿಸಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿ ಚೀಟುಹಾಕಿದನು. ಅದು ಅವನಿಗೂ ಯೋನಾತಾನನಿಗೂ ಬಂದಿತು. ಜನರು ಪಾರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅನಂತರ ಸೌಲನು - ಇಸ್ರಾಯೇಲ್ ದೇವರೇ ಸತ್ಯವನ್ನು ತಿಳಿಸು ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಲ್ಲಿ ಅದು ಅವನಿಗೂ ಯೋನಾತಾನನಿಗೂ ಬಂದಿತು; ಜನರು ಪಾರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು. ಅಧ್ಯಾಯವನ್ನು ನೋಡಿ |