1 ಸಮುಯೇಲ 14:43 - ಕನ್ನಡ ಸತ್ಯವೇದವು C.L. Bible (BSI)43 ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದೆ, ಹೇಳು,” ಎಂದು ಕೇಳಿದನು. ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆ; ಸಾಯುವುದಕ್ಕೆ ಸಿದ್ಧನಾಗಿದ್ದೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆಗ ಸೌಲನು ಯೋನಾತಾನನನ್ನು - ನೀನು ಏನು ಮಾಡಿದ್ದೀ, ಹೇಳು ಎಂದು ಕೇಳಲು ಅವನು - ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ಸಾಯುವದಕ್ಕೆ ಸಿದ್ಧನಾಗಿದ್ದೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಸೌಲನು ಯೋನಾತಾನನಿಗೆ, “ನೀನು ಏನು ಮಾಡಿದೆಯೆಂಬುದನ್ನು ನನಗೆ ತಿಳಿಸು” ಎಂದು ಕೇಳಿದನು. ಯೋನಾತಾನನು ಸೌಲನಿಗೆ, “ನಾನು ನನ್ನ ಕೋಲಿನ ತುದಿಯಿಂದ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದೆನು. ನಾನು ಅದಕ್ಕಾಗಿ ಸಾಯಬೇಕೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆಗ ಸೌಲನು ಯೋನಾತಾನನಿಗೆ, “ನೀನು ಮಾಡಿದ್ದನ್ನು ನನಗೆ ತಿಳಿಸು,” ಎಂದನು. ಅದಕ್ಕೆ ಯೋನಾತಾನನು, “ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ರುಚಿ ನೋಡಿದೆನು, ನಾನು ಸಾಯಬೇಕು,” ಎಂದನು. ಅಧ್ಯಾಯವನ್ನು ನೋಡಿ |