Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:45 - ಕನ್ನಡ ಸತ್ಯವೇದವು C.L. Bible (BSI)

45 ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:45
22 ತಿಳಿವುಗಳ ಹೋಲಿಕೆ  

ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.


ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ.


ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ಆಗ ಸೊಲೊಮೋನನು, “ಅದೋನೀಯನು ಸತ್ಪುರುಷನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ; ಆದರೆ ಅವನಲ್ಲಿ ಕೆಟ್ಟತನ ಕಂಡುಬರುವುದಾದರೆ, ಅವನು ಖಂಡಿತವಾಗಿ ಸಾಯುವನು,” ಎಂದು ಹೇಳಿದನು.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.


ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.


ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.


ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.


“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು