Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:47 - ಕನ್ನಡ ಸತ್ಯವೇದವು C.L. Bible (BSI)

47 ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದ ಕಡೆಯಲ್ಲೆಲ್ಲಾ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:47
17 ತಿಳಿವುಗಳ ಹೋಲಿಕೆ  

ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಘೋರ ಯುದ್ಧ ಇದ್ದುದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡಕೂಡಲೆ, ಅವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.


ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.


ಸೌಲನು ಅರಸನಾದಾಗ ಅವನಿಗೆ ಮೂವತ್ತು ವರ್ಷ. ಅವನು ಇಸ್ರಯೇಲರನ್ನು ನಾಲ್ವತ್ತೆರಡು ವರ್ಷ ಆಳಿದನು.


ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.


ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಹಿರಿಯಳು ಗಂಡುಮಗುವನ್ನು ಹೆತ್ತು ಅದಕ್ಕೆ “ಮೋವಾಬ್” ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷ.


ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ.


ಎತೋಮನೆಂಬ ಏಸಾವನ ವಂಶಾವಳಿ ಇದು:


ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.


ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ನಾಯಕರು.


ಹಿಂದಿರುಗುತ್ತಿರಲಿಲ್ಲ ಸೌಲನಾಕತ್ತಿ ವ್ಯರ್ಥವಾಗಿ, ಬರುತ್ತಿರಲಿಲ್ಲ ಯೋನಾತಾನನಾ ಬಿಲ್ಲು ಬರಿದಾಗಿ, ಹತರಾದವರ ರಕುತವನು ಹೀರದೆ ಪರಾಕ್ರಮಿಗಳ ಕೊಬ್ಬನು ರುಚಿಸದೆ.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು