1 ಸಮುಯೇಲ 14:6 - ಕನ್ನಡ ಸತ್ಯವೇದವು C.L. Bible (BSI)6 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.