1 ಸಮುಯೇಲ 15:12 - ಕನ್ನಡ ಸತ್ಯವೇದವು C.L. Bible (BSI)12 ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.” ಅಧ್ಯಾಯವನ್ನು ನೋಡಿ |