1 ಸಮುಯೇಲ 15:15 - ಕನ್ನಡ ಸತ್ಯವೇದವು C.L. Bible (BSI)15 ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೌಲನು - ಜನರು ನಿನ್ನ ದೇವರಾದ ಯೆಹೋವನಿಗೋಸ್ಕರ ಯಜ್ಞಸಲ್ಲಿಸುವದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ವಿುಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು. ಅಧ್ಯಾಯವನ್ನು ನೋಡಿ |