Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:17 - ಕನ್ನಡ ಸತ್ಯವೇದವು C.L. Bible (BSI)

17 “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:17
8 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.


ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು