Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:18 - ಕನ್ನಡ ಸತ್ಯವೇದವು C.L. Bible (BSI)

18 ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ನಿನಗೆ - ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:18
9 ತಿಳಿವುಗಳ ಹೋಲಿಕೆ  

ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು