Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:19 - ಕನ್ನಡ ಸತ್ಯವೇದವು C.L. Bible (BSI)

19 ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:19
11 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.


ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು