Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಸೌಲನು ಸಮುವೇಲನಿಗೆ - ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೌಲನು, “ಆದರೆ ನಾನು ಯೆಹೋವನಿಗೆ ವಿಧೇಯನಾದೆ. ಆತನು ಕಳುಹಿಸಿದಲ್ಲಿಗೆ ನಾನು ಹೋಗಿ ಅಮಾಲೇಕ್ಯರೆಲ್ಲರನ್ನು ನಾಶಗೊಳಿಸಿದೆ. ಆದರೆ ಒಬ್ಬನನ್ನೇ ನಾನು ತಂದೆನು. ಅವನೇ ರಾಜನಾದ ಅಗಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:20
12 ತಿಳಿವುಗಳ ಹೋಲಿಕೆ  

ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು