Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:22 - ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:22
24 ತಿಳಿವುಗಳ ಹೋಲಿಕೆ  

ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.


‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು.


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು