Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:23 - ಕನ್ನಡ ಸತ್ಯವೇದವು C.L. Bible (BSI)

23 ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:23
36 ತಿಳಿವುಗಳ ಹೋಲಿಕೆ  

ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.


ಆದರೆ ನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟುಹೋಗುವುದಿಲ್ಲ.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು