Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:29 - ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:29
16 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು