Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:6 - ಕನ್ನಡ ಸತ್ಯವೇದವು C.L. Bible (BSI)

6 ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:6
21 ತಿಳಿವುಗಳ ಹೋಲಿಕೆ  

ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ.


ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.


ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.


“ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.


ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೇ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


ಅಂದರೆ. ಕೇನಿಯರು, ಕೆನಿಜೀಯರು, ಕದ್ಮೋನಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು