Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:1
34 ತಿಳಿವುಗಳ ಹೋಲಿಕೆ  

ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”


ಆದ್ದರಿಂದ ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮ ನಿಮ್ಮನ್ನು ಪೀಡಿಸುತ್ತಾ ಇದೆ.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ.


ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.


“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ತರುವಾಯ ಕುಪ್ಪಿಯಲ್ಲಿರುವ ಈ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, ‘ನಾನು ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆಂದು ಸರ್ವೇಶ್ವರ ನುಡಿದಿದ್ದಾರೆ,’ ಎಂಬುದಾಗಿ ಹೇಳಿ ಕೂಡಲೆ ಬಾಗಿಲು ತೆರೆದು ಓಡಿಹೋಗು,” ಎಂದು ಆಜ್ಞಾಪಿಸಿದನು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ಹೀಗೆ ಇಸ್ರಯೇಲಿನ ನಾಯಕರೆಲ್ಲರೂ ಹೆಬ್ರೋನಿನಲ್ಲಿ ಅರಸ ದಾವೀದನ ಬಳಿಗೆ ಬಂದು ಬಿನ್ನವಿಸಿದರು. ದಾವೀದನು ಅವರೊಂದಿಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಒಂದು ಒಪ್ಪಂದ ಮಾಡಿಕೊಂಡನು. ಅವರು ಅವನನ್ನು ಅಭಿಷೇಕಿಸಿದರು. ಹೀಗೆ ಸರ್ವೇಶ್ವರ ಸಮುವೇಲನ ಮುಖಾಂತರ ಮಾಡಿದ ವಾಗ್ದಾನ ನೆರವೇರಿತು; ದಾವೀದನು ಇಸ್ರಯೇಲರ ಅರಸನಾದನು.


“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು