1 ಸಮುಯೇಲ 16:18 - ಕನ್ನಡ ಸತ್ಯವೇದವು C.L. Bible (BSI)18 ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |