1 ಸಮುಯೇಲ 16:19 - ಕನ್ನಡ ಸತ್ಯವೇದವು C.L. Bible (BSI)19 ಕೂಡಲೆ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿ ಮೇಯಿಸುತ್ತಿರುವ ನಿನ್ನ ಮಗ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸೌಲನು ಸಂದೇಶಕರ ಮೂಲಕ ಇಷಯನಿಗೆ, “ನಿನಗೆ ದಾವೀದನೆಂಬ ಮಗನಿದ್ದಾನೆ. ಅವನು ನಿನ್ನ ಕುರಿಗಳನ್ನು ಕಾಯುತ್ತಾನೆ. ಅವನನ್ನು ನನ್ನ ಬಳಿಗೆ ಕಳುಹಿಸು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು. ಅಧ್ಯಾಯವನ್ನು ನೋಡಿ |
ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.