1 ಸಮುಯೇಲ 16:4 - ಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು. ಅಧ್ಯಾಯವನ್ನು ನೋಡಿ |