Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:7
34 ತಿಳಿವುಗಳ ಹೋಲಿಕೆ  

ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.


ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.


ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.


ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಸರ್ವೇಶ್ವರಾ, ಸರ್ವೇಶ್ವರಾ, ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ಇನ್ನೇನು ಹೇಳಲಿ?


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?


ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು