Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:1 - ಕನ್ನಡ ಸತ್ಯವೇದವು C.L. Bible (BSI)

1 ಯೆಹೂದ ಪ್ರಾಂತ್ಯದ ಸೋಕೋವಿನಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸೈನ್ಯವನ್ನು ಜಮಾಯಿಸಿದ್ದರು. ಸೋಕೋವಿಗೂ ಅಜೇಕಕ್ಕೂ ಮಧ್ಯೆಯಿರುವ ಎಫೆಸ್ದಮ್ಮೀಮಿನಲ್ಲಿ ಬೀಡುಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫಿಲಿಷ್ಟಿಯರು ಯುದ್ಧಮಾಡುವದಕ್ಕೋಸ್ಕರ ಯೆಹೂದದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀವಿುನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:1
11 ತಿಳಿವುಗಳ ಹೋಲಿಕೆ  

ತಪ್ಪೂಹ, ಏನಾಮ್, ಯರ್ಮೂತ್,


ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.


ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್‍ಊರು,


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಘೋರ ಯುದ್ಧ ಇದ್ದುದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡಕೂಡಲೆ, ಅವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.


ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.


ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು