Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:11 - ಕನ್ನಡ ಸತ್ಯವೇದವು C.L. Bible (BSI)

11 ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೌಲನೂ ಎಲ್ಲಾ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಬಹಳವಾಗಿ ಭಯಪಟ್ಟರು; ಅವರ ಎದೆಯೊಡೆದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:11
12 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು.


ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.


ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಕದಗಳ ಮೇಲೆ ಗೀಜುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು