Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:12 - ಕನ್ನಡ ಸತ್ಯವೇದವು C.L. Bible (BSI)

12 ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನು ಸೌಲನ ಕಾಲದಲ್ಲಿ ಬಹು ವೃದ್ಧನಾಗಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನೆಂಬವನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾಗಿದ್ದನು. ಈ ಇಷಯನಿಗೆ ಎಂಟು ಮಂದಿ ಪುತ್ರರಿದ್ದರು. ಸೌಲನ ಕಾಲದಲ್ಲಿ ಇಷಯನು ವೃದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:12
18 ತಿಳಿವುಗಳ ಹೋಲಿಕೆ  

ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಸೌಲನು ಅವನನ್ನು, “ತರುಣನೇ, ನೀನು ಯಾರ ಮಗ?” ಎಂದು ಕೇಳಿದನು. ಅದಕ್ಕೆ ಅವನು, “ನಾನು ಬೆತ್ಲೆಹೇಮಿನವನೂ ನಿಮ್ಮ ಸೇವಕನೂ ಆದ ಜೆಸ್ಸೆಯನ ಮಗ,” ಎಂದು ಉತ್ತರಿಸಿದನು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಮಂಜೂಷವನು ಕುರಿತು ಕೇಳಿದೆವು ಎಫ್ರಾತಾದಲಿ I ನಮಗದು ಕಾಣಬಂದಿತು ಆ ಯಹಾರ್ ಮೈದಾನದಲಿ II


ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು.


ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.


ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು