ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.