Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:25 - ಕನ್ನಡ ಸತ್ಯವೇದವು C.L. Bible (BSI)

25 “ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು - ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ! ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು; ಇದಲ್ಲದೆ ಅವನ ಕುಟುಂಬಕ್ಕೆ ಸರ್ವಮಾನ್ಯವನ್ನು ಕೊಡುವನು ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:25
11 ತಿಳಿವುಗಳ ಹೋಲಿಕೆ  

ಅವನು, “ಕಿರ್ಯತ್ ಸೇಫೆರದ ಮೇಲೆ ದಾಳಿಮಾಡಿ ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆ,” ಎಂದನು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಯೇಸು, “ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ?


ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.


ಇಸ್ರಯೇಲರು ಅವನನ್ನು ನೋಡಿ ಭಯಭೀತಿಯಿಂದ ಓಡತೊಡಗಿದರು.


ಅವರು ಮುಂದಿನಂತೆಯೇ ಇಂಥಿಂಥದ್ದು ದೊರಕುವುದೆಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು