1 ಸಮುಯೇಲ 17:26 - ಕನ್ನಡ ಸತ್ಯವೇದವು C.L. Bible (BSI)26 ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು. ಅಧ್ಯಾಯವನ್ನು ನೋಡಿ |
ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.