Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:28 - ಕನ್ನಡ ಸತ್ಯವೇದವು C.L. Bible (BSI)

28 ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದಾವೀದನು ಜನರ ಸಂಗಡ ಹೀಗೆ ಮಾತಾಡುತ್ತಿರುವದನ್ನು ಅವನ ಹಿರೀ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು - ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿ? ನಿನ್ನ ಸೊಕ್ಕೂ ತುಂಟತನವೂ ನನಗೆ ಗೊತ್ತದೆ; ನೀನು ಯುದ್ಧವನ್ನು ನೋಡುವದಕ್ಕೆ ಬಂದಿದ್ದೀ ಎಂದು ಅವನನ್ನು ಗದರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:28
15 ತಿಳಿವುಗಳ ಹೋಲಿಕೆ  

ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು.


ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.


ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.


ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.


ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ದಾವೀದನು, “ನಾನೇನು ತಪ್ಪು ಮಾಡಿದೆ? ಪ್ರಶ್ನೆಯೊಂದನ್ನು ಕೇಳಬಾರದಿತ್ತೆ?” ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋದನು.


ರೆಹಬ್ಬಾಮನು, ದಾವೀದನ ಮಗ ಯೆರೀಮೋತನಿಗೆ ಜೆಸ್ಸೆಯ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು