Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:32 - ಕನ್ನಡ ಸತ್ಯವೇದವು C.L. Bible (BSI)

32 ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದಾವೀದನು ಸೌಲನಿಗೆ - ಆ ಫಿಲಿಷ್ಟಿಯನ ನಿವಿುತ್ತವಾಗಿ ಯಾವನೂ ಎದೆಗೆಡಬಾರದು; ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು ಅನ್ನಲು ಸೌಲನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ದಾವೀದನು ಸೌಲನಿಗೆ, “ಅವನ ನಿಮಿತ್ತವಾಗಿ ಯಾವ ಹೃದಯವೂ ಕುಗ್ಗಬಾರದು. ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧಮಾಡುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:32
12 ತಿಳಿವುಗಳ ಹೋಲಿಕೆ  

ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.


ದಾವೀದನು ಈ ಪ್ರಕಾರ ವಿಚಾರಿಸುತ್ತಿದ್ದಾನೆಂಬ ಸಮಾಚಾರವನ್ನು ಸೌಲನಿಗೆ ಮುಟ್ಟಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು