Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:33 - ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀನು ಅವನೊಡನೆ ಕಾದಾಡಲಾರಿ; ನೀನು ಇನ್ನೂ ಹುಡುಗನು. ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:33
7 ತಿಳಿವುಗಳ ಹೋಲಿಕೆ  

ಆದರೆ ಅವನ ಜೊತೆಯಲ್ಲಿ ಹೋಗಿದ್ದವರು, “ಆ ಜನರು ನಮಗಿಂತ ಬಲಿಷ್ಠರು! ಅವರ ಮೇಲೆ ಜಯ ಸಾಧಿಸಲು ನಮಗೆ ಶಕ್ತಿ ಸಾಲದು,” ಎಂದರು.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಆಗ ಅರಸನು ಅವನಿಗೆ, “ಈ ಯುವಕ ಯಾರ ಮಗನೆಂದು ವಿಚಾರಿಸು,” ಎಂದು ಆಜ್ಞಾಪಿಸಿದನು.


ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ,


ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು