Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:34 - ಕನ್ನಡ ಸತ್ಯವೇದವು C.L. Bible (BSI)

34 ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ದಾವೀದನು ಅವನಿಗೆ - ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲಿ ಕರಡಿಯಾಗಲಿ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:34
18 ತಿಳಿವುಗಳ ಹೋಲಿಕೆ  

ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.


ನಾನು ಒಡನೆ ಬೆನ್ನಟ್ಟಿ ಹೋಗುತ್ತಿದ್ದೆ; ಆ ಕಾಡುಮೃಗವನ್ನು ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆ. ಅದು ಹಿಂದಿರುಗಿ ನನ್ನ ಮೇಲೆ ಬಿದ್ದಾಗ ಅದನ್ನು ಗಡ್ಡ ಹಿಡಿದು, ಬಡಿದು, ಕೊಂದುಹಾಕುತ್ತಿದ್ದೆ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.


ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.


ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು.


ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.


ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು.


ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು