Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:39 - ಕನ್ನಡ ಸತ್ಯವೇದವು C.L. Bible (BSI)

39 ದಾವೀದನು ಯುದ್ಧವಸ್ತ್ರವನ್ನು ಧರಿಸಿಕೊಂಡು, ಅದರ ಮೇಲೆ ಕತ್ತಿಯನ್ನು ಬಿಗಿದುಕೊಂಡು, ನಡೆದು ನೋಡಲಾರಂಭಿಸಿದನು. ರೂಢಿಯಿಲ್ಲದ ಕಾರಣ ಅವನು ಸೌಲನಿಗೆ, “ನನಗೆ ಅಭ್ಯಾಸವಿಲ್ಲ. ಇವುಗಳನ್ನು ಧರಿಸಿಕೊಂಡು ನಡೆಯಲಾರೆ,” ಎಂದು ಹೇಳಿ ಅವುಗಳನ್ನು ತೆಗೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, “ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ” ಎಂದು ಹೇಳಿ ಅವುಗಳನ್ನು ತೆಗೆದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ದಾವೀದನು ಯುದ್ಧವಸ್ತ್ರದ ಮೇಲೆ ಕತ್ತಿಯನ್ನು ಬಿಗಿದುಕೊಂಡನಂತರ ನಡೆಯಬಹುದೋ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ - ನನಗೆ ಅಭ್ಯಾಸವಿಲ್ಲದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ ಎಂದು ಹೇಳಿ ಅವುಗಳನ್ನು ತೆಗೆದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ. ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ದಾವೀದನು ಅವನ ಖಡ್ಗವನ್ನು ತನ್ನ ಕವಚಗಳ ಮೇಲೆ ಕಟ್ಟಿಕೊಂಡು ನಡೆದು ಪರೀಕ್ಷಿಸಿದನು. ಆದರೆ ಅವನಿಗೆ ಅದರ ಅಭ್ಯಾಸವಿರಲಿಲ್ಲ. ಆಗ ದಾವೀದನು ಸೌಲನಿಗೆ, “ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗಲಾರೆನು,” ಎಂದು ಹೇಳಿ, ಅವುಗಳನ್ನು ಬಿಚ್ಚಿಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:39
5 ತಿಳಿವುಗಳ ಹೋಲಿಕೆ  

ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಅದು ಮಾತ್ರವಲ್ಲ, ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ಅವನಿಗೆ ತೊಡಿಸಿದನು. ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣವನ್ನೂ ಇಟ್ಟನು.


ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು