Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:43 - ಕನ್ನಡ ಸತ್ಯವೇದವು C.L. Bible (BSI)

43 “ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಗೊಲ್ಯಾತನು ದಾವೀದನಿಗೆ, “ಈ ಕೋಲು ಏನಕ್ಕೆ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ನೀನು ಕೋಲು ಹಿಡಿದುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ?” ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:43
14 ತಿಳಿವುಗಳ ಹೋಲಿಕೆ  

ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.


ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?


ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?


ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.


ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.


ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಆ ಫಿಲಿಷ್ಟಿಯರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿ; ನಿಮಗೆ ತೋರಿಸಬೇಕಾದದ್ದೊಂದಿದೆ,” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಸರ್ವೇಶ್ವರ ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿದ್ದಾರೆ,” ಎಂದು ಹೇಳಿದನು.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.


ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು